ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ಕು ಜನರ ಹತ್ಯೆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲು ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಿಗೆ ಉಡುಪಿಯ ಕಾಂಗ್ರೆಸ್ ಮುಖಂಡರು ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಗಳಾದ ಫಾರೂಕ್ ಚಂದ್ರನಗರ ಹಾಗೂ ಹಸನ್ ಶೇಕ್ ಮಣಿಪುರ ಕೆ.ಪಿ.ಸಿ.ಸಿ ಕಚೇರಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಅಲ್ಪ ಸಂಖ್ಯಾತ ಸಭೆಯಲ್ಲಿ ನಿರ್ಣಯಿಸಿದ್ದಾರೆ.
ಆರೋಪಿಯ ಕೃತ್ಯವು ಸಮಾಜವನ್ನು ಬೆಚ್ಚಿ ಬೀಳಿಸುವಂತಾಗಿದೆ. ಆರೋಪಿಯ ಹಿಂದೆ ಯಾರಿದ್ದಾರೆ ಆತನ ದುರುದ್ದೇಶ ಬಯಲು ಮಾಡಿ ಸಮಾಜದಲ್ಲಿ ಶಾಂತಿ ಉಂಟಾಗುವಂತೆ ಮಾಡಿ ಇನ್ನೊಬ್ಬರಿಗೆ ಇದು ಪಾಠವಾಗಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಅಲ್ಪ ಸಂಖ್ಯಾತ ಜಿಲ್ಲಾ ಅಧ್ಯಕ್ಷರು ಹಾಗೂ ರಾಜ್ಯ ಕೆ.ಪಿ.ಸಿ.ಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.