ಬೆಂಗಳೂರು: “ಇದೊಂದು ಅವಿರೋಧ ಆಯ್ಕೆಯಾಗಿತ್ತು. ಅಶೋಕ್ ಒಬ್ಬ ಹಿರಿಯ ನಾಯಕ. ನಾನು ಅವರನ್ನು ಅಭಿನಂದಿಸುತ್ತೇನೆ. ಪ್ರತಿಪಕ್ಷ ನಾಯಕನಾಗಿ ಆರ್ ಅಶೋಕ್ ಅವರ ಹೆಸರನ್ನು ಬಿಜೆಪಿ ನಾಯಕರು ಘೋಷಣೆ ಮಾಡಿದ್ದಾರೆ.ಅಶೋಕ್ ಆಯ್ಕೆಯಿಂದ ನನಗೂ ಬಹಳ ಖುಷಿಯಾಗಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ಗೆ ಪ್ರತಿಪಕ್ಷ ನಾಯಕನ ಸ್ಥಾನ ಒಲಿದಿದೆ. ಹೈಕಮಾಂಡ್ ಕಳುಹಿಸಿದ್ದ ವೀಕ್ಷಕರ ಸಮ್ಮುಖದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿ ಅಶೋಕ್ ಅವರನ್ನು ಘೋಷಣೆ ಮಾಡಲಾಗಿದೆ.
ಧನ್ಯವಾದ ತಿಳಿಸಿದ ಅಶೋಕ್: ಆಯ್ಕೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಆರ್. ಅಶೋಕ್, ” ನನ್ನನ್ನು ಪ್ರತಿಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.