ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ , ಉಡುಪಿ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ. ಕಿನ್ನಿಮೂಲ್ಕಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ನಡೆದ 70 ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ 4 ನೇ ದಿನದ ಸಹಕಾರ ಸಮಾವೇಶವು ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ್ ಸಭಾ ಭವನದಲ್ಲಿ ಜರಗಿತು.
ಮುಖ್ಯ ಅತಿಥಿಯಾಗಿ ಉಡುಪಿ ನಗರಸಭೆಯ ಪೌರಾಯುಕ್ತ ರಾಯಪ್ಪ ಭಾಗವಹಿಸಿ ಮಾತನಾಡಿ ಸಹಕಾರ ರಂಗದಲ್ಲಿ ಐಕ್ಯತೆ, ಬದ್ಧತೆ, ನಿಷ್ಠೆಯಿಂದ ಸೇವೆ ಮಾಡಿದರೆ ಯಶಸ್ಸು ಖಂಡಿತ ಸಿಗುತ್ತದೆ. ಇದಕ್ಕೆ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮುಖ್ಯಸ್ಥ ಜಯಕರ ಶೆಟ್ಟಿ ಸಾಕ್ಷಿಯಾಗಿದ್ದಾರೆ. ಸಹಕಾರ ಸಂಘಗಳಲ್ಲಿ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಜಾರಿಗೆ ತನ್ನಿ ಎಂದು ಅವರು ಈ ಸಂದರ್ಭದಲ್ಲಿ ವಿನಂತಿಸಿದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ನಿರ್ದೇಶಕ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಯುವ ಜನಾಂಗ ಸೆಳೆಯಲು ಡಿಜಿಟಲ್ ಬ್ಯಾಕಿಂಗ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಸ್ಥಳೀಯರು ತಮ್ಮ ವ್ಯಹಾರಗಳನ್ನು ಸಹಕಾರಿ ಬ್ಯಾಕಿಂಗ್ ಗಳ ಜೊತೆ ನಡೆಸುವಂತೆ ಕರೆ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಅಧ್ಯಕ್ಷ ಅರುಣ ಕುಮಾರ್ ವಹಿಸಿದ್ದರು.
ಸಹಕಾರ ಸಂಸ್ಥೆಯಲ್ಲಿ ಸರಳ ವ್ಯಪಾರ ಪ್ರಕ್ರಿಯೆ ಕುರಿತು ಎಮ್ ಜಿ ಎಮ್ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ ಸುರೇಂದ್ರನಾಥ ಶೆಟ್ಟಿ ಉಪನ್ಯಾಸ ನೀಡಿದರು.
ಮುಖ್ಯ ಅತಿಥಿಗಳಾಗಿ ದ.ಕ ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕ ರವಿರಾಜ್ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಅಲೆವೂರು ಹರೀಶ್ ಕಿಣಿ, ಶಂಕರ ಪೂಜಾರಿ ಕಟಪಾಡಿ, ಮನೋಜ್ ಕರ್ಕೇರ, ಮಟ್ಟಾರ್ ಗಣೇಶ ಕಿಣಿ, ಅಶೋಕ್ ಕುಮಾರ್ ಬಲ್ಲಾಳ, ಉಭಯ ಸಹಕಾರಿ ಬ್ಯಾಂಕ್ ಗಳ ನಿರ್ದೇಶಕ ಮಂಡಳಿ ಸದಸ್ಯರು, ನೂರಾರು ಸಹಕಾರಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಡುಪಿ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಸಿ.ಇ.ಒ ರಾಜೇಶ ಹೆಗ್ಡೆ ಸ್ವಾಗತಿಸಿದರು, ಪ್ರವೀಣ ಕುಮಾರ ಹಾಗೂ ರಮೇಶ ನಿರೂಪಿಸಿದರು. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಲಪ್ಪ ಕೋಡಿಹಳ್ಳಿ ವಂದಿಸಿದರು.