ಉಡುಪಿ: ಕರ್ನಾಟಕ ಸರಕಾರದ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ನವೆಂಬರ್ 19 ಮತ್ತು 20 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನ. 19 ರಂದು ರಾತ್ರಿ 8 ಕ್ಕೆ ಕುಂದಾಪುರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ನ. 20 ರಂದು ನಗರದ ಪರಿವೀಕ್ಷಣಾ ಮಂದಿರದಲ್ಲಿ ಜಿಲ್ಲೆಯ ಶಾಸಕರು, ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಚರ್ಚೆ, 10 ಕ್ಕೆ ಸ್ಥಳೀಯ ಕಾರ್ಯಕ್ರಮ, 11 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಆಡಳಿತ ವರ್ಗ / ಮಾಲೀಕ ವರ್ಗದ ಸಂಘಟನೆಗಳೊಂದಿಗೆ ಸಭೆ ಹಾಗೂ 11.45 ಕ್ಕೆ ಕಾರ್ಮಿಕ ಸಂಘಟನೆಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ, ನಂತರ ಮಂಗಳೂರಿಗೆ ತೆರಳಲಿರುವರು.