ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ

ಉಡುಪಿ: ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಆದಿತ್ಯವಾರ ಮುಂಜಾನೆ ವಿಶ್ವರೂಪ ದರ್ಶನ ಜರಗಿತು.

ಸಾವಿರಾರು ಹಣತೆ ದೀಪಗಳ ನಡುವೆ ಮೂಡಿಬಂದ “ಭಾರತ್ ” ಹೂವಿನ ರಂಗವಲ್ಲಿ ಭಕ್ತರ ಮನ ಸೆಳೆಯಿತು.

ಶ್ರೀ ದೇವರಿಗೆ ವಿಶೇಷ ಹೂವಿನ ಅಲಂಕಾರ ಹಾಗೂ ಮಹಾ ಪೂಜೆಯ ಬಳಿಕ ಪ್ರಸಾದ ವಿತರಣೆ ನಡೆಯಿತು

ಆಡಳಿತ ಮೊಕ್ತೇಸರ ಕೆ. ಅನ೦ತಪದ್ಮನಾಭ ಕಿಣಿ, ಅರ್ಚಕ ಜಯದೇವ ಭಟ್, ಗಣಪತಿ ಭಟ್ ಹಾಗೂ ಆಡಳಿತ ಮ೦ಡಳಿಯ ಸದಸ್ಯರು ಮತ್ತು ಜಿ ಎಸ್ ಬಿ ಸಭಾ ಸದಸ್ಯರು ಹಾಗೂ ಸಮಾಜ ಬಾ೦ಧವರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.