ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಲ್ಲಿ ಅಗ್ನಿ ದುರಂತ: 35 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲು

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಮೀನುಗಾರಿಕಾ ಬಂದರಿನಲ್ಲಿ ಭಾನುವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡು ಸುಮಾರು 35 ಮೀನುಗಾರಿಕಾ ದೋಣಿಗಳು ಸುಟ್ಟು ಕರಕಲಾಗಿವೆ.

ಉಪ ಪೊಲೀಸ್ ಆಯುಕ್ತ ಆನಂದ್ ರೆಡ್ಡಿ ಮಾತನಾಡಿ, ಬೆಂಕಿಯು ಮೊದಲು ಒಂದು ದೋಣಿಯಲ್ಲಿ ಕಾಣಿಸಿಕೊಂಡಿತು ಮತ್ತು ನಂತರ ಮಧ್ಯರಾತ್ರಿ ಸುಮಾರಿಗೆ 35 ಫೈಬರ್-ಯಾಂತ್ರೀಕೃತ ದೋಣಿಗಳಿಗೆ ವ್ಯಾಪಿಸಿತು ಎಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಪೊಲೀಸರು ಮತ್ತು ಅಗ್ನಿಶಾಮಕ ದಳದವರು ತಕ್ಷಣ ಕಾರ್ಯಪ್ರವೃತ್ತರಾದರು. ಬೆಂಕಿಯನ್ನು ಹತೋಟಿಗೆ ತರಲಾಯಿತು. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ರೆಡ್ಡಿ ತಿಳಿಸಿದ್ದಾರೆ.