ಕುಂದಾಪುರ: ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ನಡೆಸಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಶಾಶ್ವತ್ ಮತ್ತು ಪ್ರಥ್ವಿನ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧಾರಿಣಿ ಕೆ. ಎಸ್ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ್ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.