ಉಡುಪಿ: ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಎಂಜಿನಿಯರಿಂಗ್ ವಿಭಾಗದ 2014-18ನೇ ಸಾಲಿನ ವಿದ್ಯಾರ್ಥಿ ಅವಿನಾಶ್ ಎಸ್. ಶೆಟ್ಟಿ ಅವರು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ನಡೆಸಿದ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿ, ಚಿನ್ನದ ಪದಕ ಗಳಿಸಿದ್ದಾರೆ.
ಪ್ರಶಸ್ತಿಯನ್ನು ಎಸ್. ಎಂ. ಪಂಚಗಟ್ಟಿ ಅವರು ಸ್ಥಾಪಿಸಿದ್ದು, ಸಿವಿಲ್ ಎಂಜಿನಿಯರಿಂಗ್ನಲ್ಲಿ ಪದವಿ ಅಭ್ಯಾಸ ಮಾಡಿದ ಸರಕಾರಿ/ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಮಕ್ಕಳಿಗೆ ನೀಡಲಾಗುತ್ತಿದೆ. ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಸಿಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.