ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಉಡುಪಿ ಹಾಗೂ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟ 2023-24 ರ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಿನನ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ, ಶ್ರವಣ್ 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.