ಉಡುಪಿ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ (ಹೈನು ಘಟಕ) ಒಂದು ಮಿಶ್ರ ತಳಿ ಹಾಲು ಕರೆಯುವ ಹಸು ಘಟಕ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗದ ಅರ್ಹ/ಆಸಕ್ತ ಹಾಲು ಉತ್ಪಾದಕ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












