ಮಂಗಳೂರು: ಕೊಡವೂರು ವ್ಯವಸಾಯ ಸೇವಾ ಸಹಕಾರಿ ಸಂಘವು ಸಾಧಿಸಿರುವ ಸಾಧನೆಯನ್ನು ಪರಿಗಣಿಸಿ ಮಂಗಳೂರಿನಲ್ಲಿ ನಡೆದ 70 ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಆಚರಣೆಯ ಸಂದರ್ಭದಲ್ಲಿ “ಅತ್ಯುತ್ತಮ ಸಹಕಾರ ಸಂಘ” ಪ್ರಶಸ್ತಿ ಪಡೆದಿದೆ.
ಸಂಘದ ಅಧ್ಯಕ್ಷ ಕೆ.ನಾರಾಯಣ ಬಲ್ಲಾಳ್ ಗಣ್ಯರ ಸಮಕ್ಷಮ ಪ್ರಶಸ್ತಿ ಸ್ವೀಕರಿಸಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಯಶ್‌ಪಾಲ್ ಸುವರ್ಣ, ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ.ದೇವೇಗೌಡ, ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಇಂದ್ರಾಳಿ ಜಯಕರ ಶೆಟ್ಟಿ, ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕೆ.ಎಂ.ಎಫ್ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್ ಪಾಂಗಾಳ ಹಾಗೂ ಬ್ಯಾಂಕಿನ ಇತರ ನಿರ್ದೇಶಕರು, ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.