ಬೆಂಗಳೂರು: ಮರು ಪರೀಕ್ಷೆ ಯಾವಾಗ ಎಂದು ಎದುರು ನೋಡುತ್ತಿದ್ದ ಅಭ್ಯರ್ಥಿಗಳಿ ಕೆಇಎ ಇದೀಗ ಸಿಹಿ ಸುದ್ದಿಯನ್ನು ನೀಡಿದ್ದು, ಡಿಸೆಂಬರ್ 23ಕ್ಕೆ ಮರು ಪರೀಕ್ಷೆ ನಡೆಯುವುದಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಗೆ ಮರು ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬೆನ್ನಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮರು ಪರೀಕ್ಷಾ ದಿನಾಂಕವನ್ನು ಇಂದು (ನ.22) ಪ್ರಕಟಿಸಿದೆ.
2021ರ ಜನವರಿ 21 ರಂದು ಕರ್ನಾಟಕ ಪೊಲೀಸ್ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕಟವಾಗಿತ್ತು. ಅದೇ ವರ್ಷ ಅಕ್ಟೋಬರ್ 3 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪಿಎಸ್ಐ ನೇಮಕಾತಿಯ ಲಿಖಿತ ಪರೀಕ್ಷೆ ನಡೆಸಲಾಯಿತು. ಆದರೆ ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಭೇಟಿಯಾಗಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ಅಭ್ಯರ್ಥಿಗಳು ದೂರು ನೀಡಿದರು. 2022ರ ಜನವರಿ 18ರಂದು 545 ಪಿಎಸ್ಐ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾದಾಗ ಆಯ್ಕೆ ಪಟ್ಟಿ ತಡೆಗೆ ನೇಮಕಾತಿ ವಿಭಾಗದ ಎಡಿಐಜಿ ಸೂಚನೆ ನೀಡಿದರು. ಈ ಪರೀಕ್ಷೆಯಲ್ಲಿ ದೊಡ್ಡ ಅಕ್ರಮ ನಡೆದಿರುವುದು ಬೆಳಕಿಗೆ ಬಂದು ತನಿಖೆ ನಡೆಸಲಾಗಿತ್ತು. ಅಚ್ಚರಿ ಎಂಬಂತೆ ಪ್ರಕರಣದಲ್ಲಿ ಎಡಿಜಿಪಿ ಅಮೃತ್ ಪೌಲ್ ಬಂಧನವಾಗಿತ್ತು. ಜತೆಗೆ ಅಕ್ರಮಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಈ ಹಗರಣ ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು.ಪಿಎಸ್ಐ ಮರು ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ನ.10ರಂದು ಆದೇಶ ನೀಡಿತು. ಅಂದಿನ ಬಿಜೆಪಿ ಸರ್ಕಾರ ಮರು ಪರೀಕ್ಷೆಗೆ ಆದೇಶ ನೀಡಿದ್ದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಗಳನ್ನು ಪರಿಶೀಲಿಸಿ, ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತು.ರಮ್ಯಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಪರೀಕ್ಷೆ ಬರೆದವರು ಕೂಡ ಈ ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.