ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ, ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧಾರಿಣಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.