ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ, ಚೇತನಾ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಅಡಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 22 ಕೊನೆಯ ದಿನ. ಹೆಚ್ಚಿನ ಮಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಹಾಗೂ ಅಭಿವೃದ್ಧಿ ನಿರೀಕ್ಷಕರು, ಕರ್ನಾಟಕ ರಾಜ್ಯ ಮಹಿಳಾ ಅಬಿವೃದ್ಧಿ ನಿಗಮದ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, 1ನೇ ಮಹಡಿ, ಬಿ ಬ್ಲಾಕ್, ರೂಂ.ನಂ.204, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.