ಹೆಮ್ಮಾಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಕೇದಾರ್ ಮರವಂತೆ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ರಕ್ಷಿತಾ ಭಟ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಶ್ರದ್ಧಾ ಮೊಗವೀರ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.