ಹೆಜಮಾಡಿ ಮೀನುಗಾರಿಕಾ ಬಂದರಿಗಾಗಿ ಮರಗಳ ತೆರವು: ಡಿ. 15 ರಂದು ಅಹವಾಲು ಸಭೆ

ಹೆಜಮಾಡಿ: ಕಾಪು ತಾಲೂಕು ಹೆಜಮಾಡಿ ಗ್ರಾಮದ ಹೆಜಮಾಡಿ ಕೋಡಿ ಎಂಬಲ್ಲಿ ಸರಕಾರಿ ಪರಂಬೋಕು ಸ್ಥಳದಲ್ಲಿ ಮೀನುಗಾರಿಕಾ ಬಂದರಿನ ನಿರ್ಮಾಣ ಕಾಮಗಾರಿಗೆ ಅಡಚಣೆಯಾಗುವ ಒಟ್ಟು 192 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 15 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಅರಣ್ಯ ಅಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್
[email protected] ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗ ಉಪ ಅರಣ್ಯ
ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.