ನವದೆಹಲಿ:ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಹಾಗೂ ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸುವ ಭವಿಷ್ಯ ನುಡಿಯಲಾಗಿದೆ. ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಎಕ್ಸಿಟ್ ಪೋಲ್ ಫಲಿತಾಂಶ ಹೊರಬರುತ್ತಿದೆ. ವಿವಿಧ ಸಂಸ್ಥೆಗಳು ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್ಗಢ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹಾಗೂ ಮತಗಟ್ಟೆಗಳ ಸಮೀಕ್ಷೆಯ ವರದಿ ನೀಡುತ್ತಿವೆ.ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ.