ಬ್ರಹ್ಮಾವರ: ಬೈಕ್ ಗೆ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ಸಂಭವಿಸಿದೆ. 

ಮೃತ ಬೈಕ್ ಸವಾರ ನನ್ನು ಸ್ಥಳೀಯ ಉಪ್ಪಿನಕೋಟೆಯ ಪ್ರೀತಮ್ ಡಿ’ ಸಿಲ್ವ( 30)ಎಂದು ಗುರುತಿಸಲಾಗಿದೆ.

ಬೈಕ್ ಸವಾರ ಇಲ್ಲಿನ ಪೆಟ್ರೋಲ್ ಬಂಕ್ ಬಳಿಯಿಂದ ಸರ್ವೀಸ್ ರಸ್ತೆಯಿಂದ ತೆರಳುವಾಗ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.