ಬೆಂಗಳೂರು: , 2023-24ನೇ ಸಾಲಿಗೆ ಭಾರತೀಯ ಸೇನೆ, ಭದ್ರತಾಪಡೆ, ರಾಜ್ಯ ಪೊಲೀಸ್ ಸೇವೆ ಹಾಗೂ ಇತರೆ ಸರ್ಕಾರಿ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತವಾಗಿ 2 ತಿಂಗಳು ವಸತಿಯುತ ದೈಹಿಕ ಸಾಮರ್ಥ್ಯ ತರಬೇತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ ದಿದೆ.
ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2023-24ನೇ ಸಾಲಿಗೆ ಭಾರತೀಯ ಸೇನೆ, ಭದ್ರತಾ ಪಡೆ, ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಾರ್ಷಿಕ ಆದಾಯ 5 ಲಕ್ಷಕ್ಕೂ ಹೆಚ್ಚು ಮೀರಿರಬಾರದು. ಎಸ್ಸಿ, ಎಸ್ಟಿ ಸಮುದಾಯಕ್ಕೆ ಸೇರಿದವರು ಮಾತ್ರವೇ ಅರ್ಜಿಯನ್ನು ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಮತ್ತು ವಯೋಮಿತಿ – 10ನೇ ತರಗತಿ ಉತ್ತೀರ್ಣರಾಗಿರಬೇಕು. 17 ವರ್ಷ 6 ತಿಂಗಳಿನಿಂದ 23 ವರ್ಷದೊಳಗಿರಬೇಕು
ಅರ್ಜಿ ಸಲ್ಲಿಸುವ ವಿಧಾನ
ಅರ್ಹ ಅಭ್ಯರ್ಥಿಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-12-2023ರ ಸಂಜೆ 6 ಗಂಟೆಯಾಗಿರುತ್ತದೆ. www.sw.kar.nic.inಜಾಲತಾಣಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. ತಾಂತ್ರಿಕ ಸಮಸ್ಯೆಗಳು ಕಂಡು ಬಂದಲ್ಲಿ ದೂರವಾಣಿ ಸಂಖ್ಯೆ 9482300400, 9480843005 ಸಂಖ್ಯೆಗಳಿಗೆ ಸಂಪರ್ಕಿಸಬಹುದು.