ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಇವರಿಗೆ ಗೌರವಾಭಿನಂದನೆ

ಉಡುಪಿ: ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಬೆಂಗಳೂರು, ಯಕ್ಷಗಾನ ಕಲಾರಂಗ(ರಿ) ಉಡುಪಿ, ಯಕ್ಷಶಿಕ್ಷಣ ಟ್ರಸ್ಟ್(ರಿ) ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಕಿಶೋರ ಯಕ್ಷಗಾನ ಸಂಭ್ರಮ- 2023 ದ ಕಾರ್ಯಕ್ರಮದ ಸಂದರ್ಭದಲ್ಲಿ, ಯಕ್ಷಶಿಕ್ಷಣ ಟ್ರಸ್ಟ್ ನ ಗೌರವಾಧ್ಯಕ್ಷ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಶಿಕ್ಷಣ ಕ್ಷೇತ್ರಕ್ಕೆ ಉದಾರ ದಾನ ನೀಡಿದ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಎಚ್.ಎಸ್.ಶೆಟ್ಟಿ ಇವರನ್ನು ಗೌರವಿಸಿ ಅಭಿನಂದಿಸಿದರು.

ಸಮಾರಂಭದಲ್ಲಿ ಸ್ಥಾಪಕ ಅಧ್ಯಕ್ಷ ಮಾಜಿ ಶಾಸಕ ಕೆ.ರಘುಪತಿ ಭಟ್, ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ನಿಕಟಪೂರ್ವ ಅಧ್ಯಕ್ಷ ತಲ್ಲೂರು ಡಾ.ಶಿವರಾಮ ಶೆಟ್ಟಿ, ಉಪಾಧ್ಯಕ್ಷ ಎಸ್.ವಿ.ಭಟ್ , ಕಿಶನ್ ಹೆಗ್ಡೆ, ವಿ.ಜೆ.ಶೆಟ್ಟಿ, ಎಚ್.ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.

ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ಸ್ವಾಗತಿಸಿ, ಕಾರ್ಯದರ್ಶಿ ಮುರಳಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ನಾರಾಯಣ ಹೆಗಡೆ ವಂದಿಸಿದರು.

ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಯಕ್ಷಗಾನ ಕಲಾವಿದರಿಗೆ 50 % ರಿಯಾಯಿತಿ ಬಸ್ ಪಾಸ್ ಅನ್ನು ವಿತರಿಸಲಾಯಿತು.