ಕುತೂಹಲಕ್ಕೆ ತೆರೆ ಎಳೆದ ಭಾಜಪ: ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆ

ಭೋಪಾಲ್: ಮೋಹನ್ ಯಾದವ್ ಅವರು ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷವು ಘೋಷಿಸಿದ್ದು, ಹಲವು ದಿನಗಳ ಊಹಾಪೋಹಗಳಿಗೆ ತೆರೆ ಎಳೆದಿದೆ. ಉಜ್ಜಯಿನಿಯಿಂದ ಮೂರು ಬಾರಿ ಶಾಸಕರಾಗಿದ್ದ 58 ವರ್ಷದ ಯಾದವ್ ಅವರು ಶಿವರಾಜ್ ಸಿಂಗ್ ಚೌಹಾಣ್ ಅವರ ಸಚಿವ ಸಂಪುಟದ ಭಾಗವಾಗಿದ್ದರು.

ಜಗದೀಶ್ ದೇವದಾ ಮತ್ತು ರಾಜೇಂದ್ರ ಶುಕ್ಲಾ ಉಪಮುಖ್ಯಮಂತ್ರಿಗಳಾಗಿ ಹಾಗೂ ಮಾಜಿ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

“ನಾನು ಪಕ್ಷದ ಸಣ್ಣ ಕಾರ್ಯಕರ್ತ, ನಿಮ್ಮೆಲ್ಲರಿಗೂ, ರಾಜ್ಯ ನಾಯಕತ್ವ ಮತ್ತು ಕೇಂದ್ರ ನಾಯಕತ್ವಕ್ಕೆ ಧನ್ಯವಾದಗಳು, ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ನನ್ನ ಜವಾಬ್ದಾರಿಯನ್ನು ಪೂರೈಸಲು ಪ್ರಯತ್ನಿಸುತ್ತೇನೆ” ಎಂದು ನಿಯೋಜಿತ ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದ್ದಾರೆ.