ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ಕೊಂಚ ಚುರುಕುಗೊಂಡಿದೆ. ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದ್ದು, ಗುರುವಾರವೂ ಮುಂದುವರಿದಿದೆ. ಗುರುವಾರ ಮಧ್ಯಾಹ್ನದ ಬಳಿಕ ಉತ್ತಮ ಮಳೆಯಾಗಿದೆ.
ಮಂಗಳೂರು ನಗರದಲ್ಲಿ ಮಳೆ ವ್ಯಾಪಕವಾಗಿ ಸುರಿಯುತ್ತಿರುವ ಹಿನ್ನೆಲೆ ರಸ್ತೆಯಲ್ಲಿ ನೀರು ತುಂಬಿ ಸಂಚಾರಕ್ಕೆ ಅಡ್ಡಿ ಉಂಟಾಯ್ತು. ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗಿದೆ.
ನೇತ್ರಾವತಿ, ಕುಮಾರಧಾರ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇನ್ನೂ 3, 4 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.