ಮಣಿಪಾಲ: ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಣಿಪಾಲ ವಲಯ ವತಿಯಿಂದ ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಉಡುಪಿ ತಾಲೂಕು ಜನಜಾಗ್ರತಿ ವೇದಿಕೆ ಅಧ್ಯಕ್ಷ ಸತ್ಯಾನಂದ ನಾಯಕ್ ಮಾತನಾಡಿ, ಯೋಜನೆಯ ಹಲವಾರು ಸೌಲಭ್ಯಗಳು, ಸಮಾಜಕ್ಕೆ ಯೋಜನೆಯಿಂದ ಆಗಿರುವ ಪ್ರಯೋಜನಗಳು ಮತ್ತು, ಸ್ವಾಸ್ತ್ಯ ಸಂಕಲ್ಪದ ಉದ್ದೇಶವನ್ನು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಬಾಳಿಗಾ ಆಸ್ಪತ್ರೆಯ ಹಿರಿಯ ವೈದ್ಯೆ ಡಾ. ಸೌಜನ್ಯ ಮಾತನಾಡಿ, ದುಶ್ಚಟಗಳಿಂದ ಆಗುವ ಪರಿಣಾಮಗಳನ್ನು ವಿವರಿಸಿದರು. ಇತ್ತೀಚೆಗೆ ಹದಿಹರೆಯದ ಮಕ್ಕಳು ಮಾಡುತ್ತಿರುವ ಆತ್ಮ ಹತ್ಯೆಗಳ ಬಗ್ಗೆ ಪರಿಣಾಮಕಾರಿಯಾಗಿ ಮಕ್ಜಳ ಮನ ಮುಟ್ಟುವಂತೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಹಿರಿಯ ತರಬೇತುದಾರ ಭಾಸ್ಕರ್ ವಹಿಸಿದ್ದರು.
ವೇದಿಕೆಯಲ್ಲಿ ತಾಲೂಕು ಯೋಜನಾಧಿಕಾರಿ ರಾಮ ಎಮ್, ಉಪನ್ಯಾಸಕ ಶ್ರೀ ಮದುಸೂದನ್,ಮೇಲ್ವಿಚಾರಕಿ ಶ್ರೀಮತಿ ಮಂಜುಳಾ ಸೇವಾ ಪ್ರತಿನಿಧಿ ಶ್ರೀಮತಿ ಶಶಿಕಲಾ ಮುಂತಾದವರು ಉಪಸ್ಥಿತರಿದ್ದರು.
ಮಣಿಪಾಲ ವಲಯ ಮೇಲ್ವಿಚಾರಕಿ ಮಂಜುಳಾ ಸ್ವಾಗತಿಸಿದರು. ಉಪನ್ಯಾಸಕಿ ಪೂರ್ಣಿಮಾ ನಿರೂಪಿಸಿದರು.