ಪಡುಬಿದ್ರಿ: ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ನಯಾತ್ ಕಟ್ಟಡದ ಮುಂಭಾಗದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರನ್ನು ಮರಳು ಸಹಿತ ಪಡುಬಿದ್ರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಾದ ಟಿಪ್ಪರ್ ಮಾಲಕ ಗುರುಪುರದ ರಾಜೇಶ್ ಹಾಗೂ ಚಾಲಕ ನಂದಿಕೂರು ದೇವಸ್ಥಾನ ಬಳಿಯ ನಿವಾಸಿ ಸರ್ಫ್ರಾಜ್ ವಿರುದ್ದ ಪೊಲೀಸರು ಕೇಸು ದಾಖಲಿಸಿದ್ದಾರೆ.
ಟಿಪ್ಪರ್ ಮಾಲಿಕನ ಸೂಚನೆಯಂತೆ ವಾಹನದಲ್ಲಿ ಮರಳು ತುಂಬಿಸಿ ಪಡುಬಿದ್ರಿ ಬೀಚ್ ಕಡೆ ಸಾಗಿಸಲು ಹೊರಟಿದ್ದ ಟಿಪ್ಪರನ್ನು ಪಡುಬಿದ್ರಿ ಪಿಎಸ್ ಐ ಪ್ರಸನ್ನ ಎಂ.ಎಸ್, ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಯುನಿಟ್ ಮರಳು ಪತ್ತೆಯಾಗಿದ್ದು, ಮರಳಿನ ಪರವಾನಿಗೆ ಸಹಿತ ವಾಹನಕ್ಕೆ ಸಂಬಂಧಿಸಿದ ಯಾವುದೇ ದಾಖಲೆ ಇಲ್ಲದಿದ್ದ ಕಾರಣ ಮರಳು ಸಹಿತ ವಾಹನವನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ.