ಉಡುಪಿ, ಜುಲೈ 19: ಬ್ಯಾಂಕ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್-2019 ರ ಮಾಹೆಯಲ್ಲಿ ನಡೆಸಲು ಉದ್ದೇಶಿಸಿರುವ ಐ.ಬಿ.ಪಿ.ಎಸ್ ಸಾಮಾನ್ಯ ಲಿಖಿತ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಉಡುಪಿ ಇವರ ಆಶ್ರಯದಲ್ಲಿ ಸ್ಟಡಿ ಸರ್ಕಲ್ ಯೋಜನೆಯಡಿಯಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ರಜತಾದ್ರಿ, ಮಣಿಪಾಲದಲ್ಲಿ ಆಯೋಜಿಸಲಾಗಿದೆ.
ತರಬೇತಿ ತರಗತಿಗಳನ್ನು ವಾರದ ದಿನಗಳಲ್ಲಿ ಅಪರಾಹ್ನ 3.30 ರಿಂದ 5.30 ರ ವರೆಗೆ ಹಾಗೂ ರಜಾದಿನಗಳಲ್ಲಿ ನಡೆಸಲಾಗುವುದು.
ಪರೀಕ್ಷಾ ಪೂರ್ವ ತರಬೇತಿ ಪಡೆಯಲ್ಛಿಸುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೋಂದಾಯಿಸಲು ಸೂಚಿಸಲಾಗಿದೆ.
ತರಬೇತಿಯು ಉಚಿತವಾಗಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820 2574869, 9480259790 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












