ವಿದೇಶಿ ವ್ಯಾಸಂಗಕ್ಕೆ ವಿದ್ಯಾನಿಧಿ ಯೋಜನೆ ವಿಸ್ತರಣೆ : ರೈತರ ಮಕ್ಕಳಿಗೆ ಗುಡ್ ನ್ಯೂಸ್

ಬೆಂಗಳೂರು:ರೈತರ ಮಕ್ಕಳಿಗಾಗಿ ರೂಪಿಸಿದ ವಿದ್ಯಾನಿಧಿ ಯೋಜನೆ ಕಾಲೇಜು ಶಿಕ್ಷಣಕ್ಕೆ ಸೀಮಿತವಾಗಿದೆ. ರೈತರ ಮಕ್ಕಳಿಗಾಗಿ ರೂಪಿಸಿದ ವಿದ್ಯಾನಿಧಿ ಯೋಜನೆಯನ್ನು ವಿದೇಶಿ ವ್ಯಾಸಂಗಕ್ಕೂ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ. ವಾರ್ಷಿಕ ಕನಿಷ್ಠ 100 ಮಕ್ಕಳಿಗೆ ಅವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

ಸಂಶೋಧನೆ, ಉನ್ನತ ಶಿಕ್ಷಣ ಸೇರಿ ಯಾವುದೇ ವಿವಿಗಳಲ್ಲಿ ವ್ಯಾಸಂಗ ಮಾಡಿದರೂ ರೈತರ ಮಕ್ಕಳಿಗೆ ನೆರವು ನೀಡುವ ಉದ್ದೇಶದಿಂದ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗುವುದು. ಯೋಜನೆಗೆ ವಾರ್ಷಿಕ 100 ಕೋಟಿ ರೂಪಾಯಿ ಬೇಕಾಗಬಹುದು ಎಂದು ಅಂದಾಜಿಸಿದ್ದು, ಮುಂದಿನ ಬಜೆಟ್ ನಲ್ಲಿ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ವಿದ್ಯಾರ್ಥಿಗಳಿಗೆ 2,000 ರೂ. ನೀಡಲಾಗುತ್ತಿದ್ದು, ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಾರ್ಷಿಕ 100 ರೈತರ ಮಕ್ಕಳಿಗೆ ವಿದೇಶದಲ್ಲಿ ಯಾವುದೇ ರೀತಿಯ ಶಿಕ್ಷಣ ಪಡೆಯಲು ಅಗತ್ಯವಾದ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲು ಚಿಂತನೆ ನಡೆಸಿದೆ.