ಹೆಬ್ರಿ: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.24ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವ ಹೆಬ್ರಿಯ ಶಶಾಂಕ(16) ಎಂದು ಗುರುತಿಸಲಾಗಿದೆ.
ಶಶಾಂಕ್ ಹೆಬ್ರಿ ಕಾಲೇಜ್ ಒಂದರಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ಡಿ.24ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಲಗುವ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












