ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು
ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ (ರಿ), ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 27 ರಂದು ಬೆಳಗ್ಗೆ 10.30 ಕ್ಕೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ ಹಾಲ್ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಭಾಸ್ಕರ್ ಶೆಟ್ಟಿ ಎಸ್
ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್, ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಜಿಲ್ಲಾ ಅಧ್ಯಕ್ಷ ಸುನಿಲ ಟಿ ಮಾಸರೆಡ್ಡಿ, ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ಎನ್ ವಿಜಯ ಬಲ್ಲಾಳ್, ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಬಳಕೆದಾರರ ವೇದಿಕೆಯ ಮಾಜಿ ಸಂಚಾಲಕ ಎ.ಪಿ. ಕೊಡಂಚ ಉಪನ್ಯಾಸ ನೀಡಲಿದ್ದಾರೆ.