ಇಂದು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿಯ ಸಹಯೋಗದೊಂದಿಗೆ ಸೊರಬದ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ-ಬಾಲಕಿಯರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.
ಪ್ರತಿ ತಾಲೂಕಿಗೆ 4-6ರಂತೆ ರಾಜ್ಯದ ಎಲ್ಲಾ ತಾಲೂಕುಗಳು ಸೇರಿದಂತೆ ರಾಜ್ಯದಾದ್ಯಂತ ಸುಮಾರು 3000 ಕೆ.ಪಿ.ಎಸ್. ಮಾದರಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.
ಹಿಂದೆ ಇದ್ದ ಹಳೆಯ ಜನಪದ ಕ್ರೀಡೆಗಳು ಕಣ್ಮರೆಯಾಗಿವೆ. ಮಕ್ಕಳು ದೇಶದ ಸಾಧಕರ ಸಾಲಿನಲ್ಲಿ ನಿಲ್ಲುವಂತಿಲ್ಲ ಸಕಾಲಿಕ ಪೆÇ್ರೀತ್ಸಾಹ ಅಗತ್ಯ. ಸ್ಥಳೀಯವಾಗಿಯೂ ಜಗತ್ತಿಗೆ ಪ್ರೇರಣೆಯಾಗಬಹುದಾದ ಪ್ರತಿಭೆಗಳು ಇವೆ ಎಂದರು.ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಸಹಕಾರಿಯಾಗಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸುವ ಅಗತ್ಯವಿದೆ ಎಂದರು. ಮಕ್ಕಳಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕೆ ಅವಕಾಶ ಕಲ್ಪಿಸಿಕೊಡುವುದರ ಜೊತೆಗೆ ಸರ್ಕಾರ ಹಾಗೂ ಸ್ಥಳೀಯರ ಪೆÇ್ರೀತ್ಸಾಹವೂ ಅತ್ಯಗತ್ಯ ಎಂದರು.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೊರತತೆ ಇರುವ 5500 ದೈಹಿಕ ಶಿಕ್ಷಕರು ಹಾಗೂ 40,000ಕ್ಕೂ ಹೆಚ್ಚಿನ ಶಿಕ್ಷಕರ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಅಂತ ತಿಳಿಸಿದರು.ಈ ಶಾಲೆಗಳಲ್ಲಿ ಪಠ್ಯ ವಿಷಯಗಳಲ್ಲದೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ಎಲ್ಲಾ ಪ್ರಕಾರದ ಶಿಕ್ಷಣ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಹಂತದಿಂದ ದ್ವಿತೀಯ ಪಿ.ಯು.ಸಿ.ವರೆಗಿನ ಶಿಕ್ಷಣ ಪಡೆಯುವ ಮಕ್ಕಳಿಗೆ ಸಮಾಜದ ಎಲ್ಲಾ ಕ್ಷೇತ್ರಗಳ ಪರಿಚಯವಾಗಲಿದೆ ಮಾತ್ರವಲ್ಲ ಅವರ ಸವಾರ್ಂಗೀಣ ವಿಕಾಸಕ್ಕೆ ಅವಕಾಶವಾಗಲಿದೆ ಎಂದರು.