ಲಖನೌ: ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೂ ಮುನ್ನ ಡಿಸೆಂಬರ್ 30ರಂದು ಅಯೋಧ್ಯೆಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ, ಹೊಸ ವಿಮಾನ ನಿಲ್ದಾಣ ಮತ್ತು ನವೀಕರಿಸಿದ ರೈಲ್ವೆ ನಿಲ್ದಾಣಕ್ಕೆ ಚಾಲನೆ ನೀಡಲಿದ್ದಾರೆ.ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಆಗಲಿದೆ. ಅದಕ್ಕಾಗಿ, ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ.
ಅಯೋಧ್ಯೆ ನಗರದಲ್ಲಿ ದೊಡ್ಡ ದೊಡ್ಡ ಪೋಸ್ಟರ್‌ಗಳನ್ನು ಹಾಕಲಾಗಿದ್ದು, ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ನಡುವೆ, ರಾಮ ದೇವಾಲಯದಲ್ಲಿ ಅಳವಡಿಸಲು ತಯಾರಿಸಿರುವ 600 ಕೆ.ಜಿ ತೂಕದ ಬೃಹತ್ ಘಂಟೆ ಎಲ್ಲರ ಗಮನ ಸೆಳೆಯುತ್ತಿದೆ. ವಿಮಾನ ನಿಲ್ದಾಣದಿಂದ ರೈಲ್ವೆ ನಿಲ್ದಾಣದವರೆಗೆ ರೋಡ್ ಶೋ ನಡೆಯಲಿದೆ.ಈ ಘಂಟೆಯ ಶಬ್ಧವು 10 ಕಿ.ಮೀವರೆಗೆ ವ್ಯಾಪಿಸಲಿದೆ ಎಂದು ವರದಿಗಳು ತಿಳಿಸಿವೆ.ಸುದ್ದಿ ಸಂಸ್ಥೆ ಎಎನ್‌ಐ, ಬೃಹತ್ ಘಂಟೆಯ ವಿಡಿಯೊವನ್ನು ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.