ಉಡುಪಿ: ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ 9ನೇ ವಾರದ ಪರಿಸರ ಸ್ನೇಹಿ ಅಭಿಯಾನವು ಶನಿವಾರ ಸಂಜೆ ಅಜ್ಜರಕಾಡು ಉದ್ಯಾನವನದಲ್ಲಿ ನಡೆಯಿತು.
ಹಿರಿಯ ವೈದ್ಯ ಡಾ. ಸುರೇಶ್ ಚಂದ್ರ ಶೆಟ್ಟಿ ಅವರು ಚಾಲನೆ ನೀಡಿದರು.
ಬಟ್ಟೆ ಚೀಲಗಳನ್ನು ವಿತರಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ ಸಾರ್ವಜನಿಕ ಸಂಪರ್ಕಾಧಿಕಾರಿ ರಾಘವೇಂದ್ರ ನಾಯಕ್, ಅವ್ಯಾಹತವಾಗಿ ಮರಗಳನ್ನು ಕಡಿಯುವುದರಿಂದ ಅರಣ್ಯ ವ್ಯಾಪ್ತಿ ಕಡಿಮೆಯಾಗುತ್ತಿದೆ. ಪರಿಸರವನ್ನು ನಾಶಮಾಡಿದರೆ ಮಾನವ ಜನಾಂಗದ ವಿನಾಶಕ್ಕೆ ದಾರಿ ಮಾಡಿಕೊಡುತ್ತದೆ.
ಸಾಧ್ಯವಾದಷ್ಟು ಮಟ್ಟಿಗೆ ಪ್ಲಾಸ್ಟಿಕ್ ಉಪಯೋಗ ಕಡಿಮೆಮಾಡುವ ಮೂಲಕ ಬಟ್ಟೆ ಚೀಲಗಳನ್ನು ಉಪಯೋಗಿಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು.
ಉದ್ಯಾನವನದ ಸುತ್ತಮುತ್ತ ಸಸಿಗಳನ್ನು ಇದೇ ಸಂದರ್ಭದಲ್ಲಿ ನೆಡಲಾಯಿತು. ಸ್ವಚ್ಚತಾ ಅಭಿಯಾನದ ಬಳಿಕ ಬಟ್ಟೆ ಚೀಲಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬ್ಯಾಂಕ್ ಪ್ರಬಂಧಕ ಗುರುದತ್, ಜೆಸಿಐ ಉಡುಪಿ ಸಿಟಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಹಿರಿಯ ನಾಗರಿಕ ವೇದಿಕೆ ಕಾರ್ಯದರ್ಶಿ ಸದಾನಂದ ಹೆಗ್ಡೆ, ಮಾಜಿ ಸೈನಿಕ ವಾದಿರಾಜ್ ಹೆಗ್ಡೆ, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರ ಜಿಲ್ಲಾ ಸಂಯೋಜಕ ವಿವೇಕ್, ಸದಾನಂದ ಶೆಟ್ಟಿ, ರಫೀಕ್ ಖಾನ್, ಉದಯ ನಾಯ್ಕ್, ಚಿತ್ತರಂಜನ್, ಅಭಿಷೇಕ್, ವೀಕ್ಷಿತ್ ಕೊರಂಗ್ರಪಾಡಿ, ಕಿರಣ್ ಭಟ್ ಉಪಸ್ಥಿತರಿದ್ದರು.
ರಾಘವೇಂದ್ರ ಪ್ರಭು ಕರ್ವಾಲು ಸ್ವಾಗತಿಸಿ, ಗಣೇಶ್ ಪ್ರಸಾದ್ ನಿರೂಪಿಸಿದರು.