ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬ್ಯುಲೆನ್ಸ್; ಚಾಲಕ ಪ್ರಾಣಾಪಯದಿಂದ ಪಾರು

ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬ್ಯುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಮಂಗಳವಾರ(ಜ.2 ರಂದು) ಮುಂಜಾನೆ ನಡೆದಿದೆ.

ಆಂಬ್ಯುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ ಯಾರೂ ಇರಲಿಲ್ಲ. ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬ್ಯುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಇದರಿಂದ ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ.

ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.