ಉಡುಪಿ, ಜನವರಿ 03 (ಕವಾ): ಜಿಲ್ಲೆಯ ಯುವಜನರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ನೆಹರು ಯುವ ಕೇಂದ್ರವು “ನನ್ನ ಭಾರತ- ವಿಕಸಿತ ಭಾರತ @ 2047” ಕುರಿತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯು ಜನವರಿ 9 ರಂದು ಬೆಳಗ್ಗೆ 10 ಗಂಟೆಗೆ ನಗರದ ಎಂ.ಜಿ.ಎಂ ಕಾಲೇಜಿನಲ್ಲಿ ಆಯೋಜಿಸಲಾಗಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಅಭ್ಯರ್ಥಿಗಳು ರಾಜ್ಯ ಮಟ್ಟದಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.
ಸ್ಪರ್ಧೆಯಲ್ಲಿ 15 ರಿಂದ 29 ವರ್ಷದೊಳಗಿನ ಜಿಲ್ಲೆಯ ನಿವಾಸಿಗಳು ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸುಚಿತ್ ಕೋಟ್ಯಾನ್ ಮೊ.ನಂ: 8884323443, 9901502622, ದೂ.ಸಂಖ್ಯೆ: 0820-2574992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.