ಮಂಗಳೂರು: ಕನ್ನಡದ ಖ್ಯಾತ ಸಾಹಿತಿ ಯಕ್ಷಗಾನ ಪ್ರಸಂಗ ಕರ್ತೃ ವಿದ್ವಾಂಸ ಪ್ರೊ.ಅಮೃತ ಸೋಮೇಶ್ವರ (89) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಕನ್ನಡ, ತುಳು ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ, ಸಮಾಜಮುಖಿ ಚಂತನೆಯುಳ್ಳ ಸಹೃದಯಿ ವ್ಯಕ್ತಿಯಾಗಿದ್ದ ಇವರು ಎಲ್ಲರಿಗೆ ಪರಿಚಿತರಾಗಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಮೀಪದ ಅಡ್ಯ ಎಂಬಲ್ಲಿ 1935 ಸೆಪ್ಟಂಬರ್ 27 ರಂದು ಜನನ. ಕೋಟೆಕಾರಿನ ಸ್ಟೆಲ್ಲಾ ಮೇರಿ ಕಾನ್ವೆಂಟ್, ಆನಂದಾಶ್ರಮ, ಸೇಂಟ್ ಅಲೋಷಿಯಸ್ ಕಾಲೇಜು, ಮದರಾಸು ವಿಶ್ವವಿದ್ಯಾಲಯದಲ್ಲಿ ಶಿಕ್ಷಣ. ಅಲೋಷಿಯಸ್ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭ. ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಎಂ.ಎ.ಪದವಿ ಪಡೆದು ಪುತ್ತೂರಿನ ಸೇಂಟ್ ಫಿಲೋಮಿನ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಬಳಿಕ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, 1993ರಲ್ಲಿ ನಿವೃತ್ತಿ ಹೊಂದಿದ್ದಾರೆ.
ಮೃತರು ಶಿಷ್ಯರು ಅಭಿಮಾನಿಗಳು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.