ಮಂಗಳೂರು: ಬಸ್-ಲಾರಿ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿರುವ ಘಟನೆ ಮೂಡಬಿದ್ರೆಯ ತೋಡಾರು ಮಸೀದಿ ಬಳಿ ಮಂಗಳವಾರ ಸಂಭವಿಸಿದೆ.
ಬಸ್ ಮೂಡಬಿದಿರೆಯಿಂದ ಮಂಗಳೂರು ಕಡೆಗೆ ಹಾಗೂ ಲಾರಿ ಮಂಗಳೂರಿಂದ ಮೂಡಬಿದಿರೆ ಕಡೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ಬಸ್ ಹಾಗೂ ಲಾರಿ ಚಾಲಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹೊರತೆಗೆಯಲು ಹರಸಹಾಸ ಪಡಬೇಕಾಯಿತು.
ಅಲ್ಲದೇ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಹಿತ ಗಾಯಗಳಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ಬಸ್ ಹಾಗೂ ಲಾರಿಯ ಮುಂಭಾಗ ಪೂರ್ಣ ಜಖಾಂ ಆಗಿವೆ. ಘಟನೆಯಿಂದ ಕೆಲ ನಿಮಿಷಗಳ ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.