ಕುಂದಾಪುರ: ಕುಂದಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ, ಬೈಕನ್ನು ವಶಪಡಿಸಿಕೊಳ್ಳುವಲ್ಲಿ ಕುಂದಾಪುರ ಠಾಣ ಪಿಐ ಮತ್ತು ತಂಡ ಯಶಸ್ವಿಯಾಗಿದ್ದಾರೆ.
ಅನಂತ ಎಂಬವರು ಭಂಡಾರ್ಕಾರ್ಸ್ ಕಾಲೇಜು ರಸ್ತೆಯಲ್ಲಿಯಲ್ಲಿರುವ ಸರಕಾರಿ ನೌಕರರ ಸಂಘದ ಕಟ್ಟಡದ ಬಳಿಯಲ್ಲಿ ಹೀರೋ ಹೋಂಡಾ ಕಂಪೆನಿಯ ಸ್ಪ್ಲೆಂಡರ್ ಬೈಕನ್ನು ನಿಲ್ಲಿಸಿ ಕೆಲಸಕ್ಕೆ ತೆರಳಿದ್ದು ಸಂಜೆ ವೇಳೆಗೆ ವಾಪಾಸು ಬಂದು ನೋಡುವಾಗ ಬೈಕ್ ಪಾರ್ಕಿಂಗ್ ಮಾಡಿದ ಸ್ಥಳದಲ್ಲಿ ಇಲ್ಲದೇ ಇದ್ದು ಎಲ್ಲಾ ಕಡೆ ಹುಡುಕಾಡಿ ಸಿಕ್ಕಿರುವುದಿಲ್ಲ.
ಬೈಕನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಕುಂದಾಪುರ ಠಾಣೆಯಲ್ಲಿ ದೂರನ್ನು ನೀಡಿದ್ದರು.












