ಉಡುಪಿ: ಶ್ರೀ ವೆಂಕಟರಮಣ ದೇವಸ್ಥಾನ ಕರಂಬಳ್ಳಿ ಇಲ್ಲಿನ ವಾರ್ಷಿಕ ಮಹಾರಥೋತ್ಸವ ಶನಿವಾರ ರಾತ್ರಿ ನಡೆಯಿತು. ಧಾರ್ಮಿಕ ಪೂಜಾ ವಿಧಿಗಳನ್ನು ಪಾಡಿಗಾರ ವಾಸುದೇವ ತಂತ್ರಿಗಳು ನಡೆಸಿಕೊಟ್ಟರು. ಸಾರ್ವಜನಿಕ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು.
ಆಡಳಿತ ಮೊಕ್ತೇಸರ ಮಾಜಿ ಶಾಸಕ ರಘುಪತಿ ಭಟ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.












