ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ನಡೆದಿದ್ದ ವಿಮಾನ ರನ್ ವೇಯಿಂದ ಜಾರಿದ ಪ್ರಕರಣ ಘಟನೆಗೆ ಸಂಬಂಧಿಸಿದಂತೆ ಏರ್ ಇಂಡಿಯಾ ವಿಮಾನದ ಪೈಲಟ್ ಕ್ಯಾಪ್ಟನ್ ಪ್ರವೀಣ್ ಲೈಸೆನ್ಸ್ ರದ್ದುಗೊಂಡಿದೆ.
ಕಳೆದ ಕೆಲ ದಿನಗಳ ಹಿಂದೆ ವಿಮಾನ ನಿಲ್ದಾಣದಲ್ಲಿ ರನ್ ವೇಯಿಂದ ವಿಮಾನ ಜಾರಿತ್ತು. ಹೀಗಾಗಿ ಲೈಸನ್ಸ್ ರದ್ದು ಮಾಡುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಆದೇಶ ನೀಡಿದೆ. ನಿರ್ಲಕ್ಷ ಎಸಗಿದ ಹಿನ್ನೆಲೆಯಲ್ಲಿ ವಿಮಾನದ ಪೈಲೆಟ್ ಲೈಸೆನ್ಸ್ ರದ್ದಾಗಿದೆ.
ಘಟನೆಯ ಹಿನ್ನೆಲೆ:
ಜೂನ್ 30ರಂದು ಸಂಜೆ ದುಬೈಯಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ
ಮಂಗಳೂರು ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆದ ಬಳಿಕ ರನ್ ವೇಯಿಂದ ಜಾರಿ ಚರಂಡಿ ದಾಟಿ ನಿಂತಿತ್ತು. ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ 183 ಪ್ರಯಾಣಿಕರು ಘೋರ ದುರಂತದಿಂದ ಸ್ವಲ್ಪದರಲ್ಲೇ ಪಾರಾಗಿದ್ದರು.