ಕಟಪಾಡಿ: ಐ.ಸಿ.ಎಸ್.ಐ( ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ) ನಡೆಸುವ ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸ್ ನ ಮೊದಲ ಹಂತವಾದ ಸಿ.ಎಸ್.ಇ.ಇ.ಟಿ, ಜನವರಿ 2024 ರ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ತ್ರಿಶಾ ಕ್ಲಾಸಸ್ ವತಿಯಿಂದ ಸನ್ಮಾನ ಕಾರ್ಯಕ್ರಮವು ಜ. 29 ರಂದು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ನಡೆಯಿತು.
ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಹೆತ್ತವರ ಸಮ್ಮುಖದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು.
ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಗುರುಪ್ರಸಾದ್ ರಾವ್ ಅವರು ಮುಂದಿನ ಹಂತವಾದ ಸಿ.ಎಸ್ ಎಕ್ಸಿಕ್ಯೂಟಿವ್ ಕಾರ್ಯವೈಖರಿ ಹಾಗೂ ಸಿದ್ಧತೆಯ ಬಗ್ಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲ ನಾರಾಯಣ್ ರಾವ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಗುರುಪ್ರಸಾದ್ ರಾವ್, ತ್ರಿಶಾ ಕ್ಲಾಸಸ್ ಉಡುಪಿ ಕೇಂದ್ರದ ಮುಖ್ಯಸ್ಥ ವಿಘ್ನೇಶ್ ಶೆಣೈ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸಮೀಕ್ಷಾ ನಿರೂಪಿಸಿ ವಂದಿಸಿದರು.