ಭೋಪಾಲ್: ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗಢ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 10 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಜನರು ಗಾಯಗೊಂಡಿದ್ದಾರೆ.
ಸ್ಫೋಟವು ಸಮೀಪದ ಅರವತ್ತು ಮನೆಗಳು ಹಾನಿಗೀಡಾಗಿವೆ. ಮೂರು ಡಜನ್ಗಿಂತಲೂ ಹೆಚ್ಚು ಪ್ರಯಾಣಿಕರು ಸ್ಫೋಟದಿಂದ ಪ್ರಭಾವಿತರಾಗಿದ್ದಾರೆ. ಕಾರ್ಖಾನೆಯಲ್ಲಿ ನಿರಂತರ ಸ್ಫೋಟಗಳು ಸಂಭವಿಸಿದ ಕಾರಣ 100 ಕ್ಕೂ ಹೆಚ್ಚು ಮನೆಗಳನ್ನು ಅಧಿಕಾರಿಗಳು ಸ್ಥಳಾಂತರಿಸಿದ್ದಾರೆ. ಸ್ಫೋಟದಿಂದಾಗಿ ಗಮನಾರ್ಹ ಸಂಖ್ಯೆಯ ದ್ವಿಚಕ್ರ ವಾಹನಗಳು ಬೆಂಕಿಗೆ ಆಹುತಿಯಾಗಿವೆ.
#WATCH | Firefighting operation is underway at the firecracker factory in Harda, Madhya Pradesh where a massive explosion took place today.
— ANI (@ANI) February 6, 2024
Six people have died and 59 others are injured in the incident. pic.twitter.com/rbUFx6v6UH
ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅಧಿಕಾರಿಗಳೊಂದಿಗೆ ಮಾತನಾಡಿ, ಸಚಿವ ಉದಯ್ ಪ್ರತಾಪ್ ಸಿಂಗ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಜಿತ್ ಕೇಸರಿ ಮತ್ತು ಮಹಾನಿರ್ದೇಶಕ ಗೃಹ ರಕ್ಷಕ ಅರವಿಂದ್ ಕುಮಾರ್ ಸೇರಿದಂತೆ ಪ್ರಮುಖ ಅಧಿಕಾರಿಗಳಿಗೆ ಹೆಲಿಕಾಪ್ಟರ್ ಮೂಲಕ ಹರ್ದಾಗೆ ಧಾವಿಸುವಂತೆ ಸೂಚಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ತಂಡ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಾಯಾಳುಗಳನ್ನು ಹೋಶಂಗಾಬಾದ್ ಮತ್ತು ಭೋಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
#WATCH | Madhya Pradesh minister Uday Pratap Singh visits District Hospital in Harda, Madhya Pradesh to meet the patients injured in a massive explosion that took place in a firecracker factory, earlier today. pic.twitter.com/NUKLjr9R3E
— ANI (@ANI) February 6, 2024












