ಪೆರ್ಡೂರು: ಬಂಟರ ಸಂಘ(ರಿ) ಪೆರ್ಡೂರು ಮಂಡಲ ಶ್ರೀಮತಿ ಸರ್ವಾಣಿ ಪಳ್ಳಿ ಶ್ರೀನಿವಾಸ ಹೆಗ್ಡೆ ಬಂಟರ ಸಮುದಾಯ ಭವನದ (Smt Sarvani Palli Srinivasa Hegde Bunts Community Hall) ಉದ್ಘಾಟನಾ ಸಮಾರಂಭವು ಫೆ.11 ರಂದು ಜರುಗಲಿದೆ.
ಬಳಿಕ ಸಭಾಕಾರ್ಯಕ್ರಮ ನಡೆಯಲಿದ್ದು ಅಧ್ಯಕ್ಷತೆಯನ್ನು ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಶಾಂತರಾಮ ಸೂಡ ವಹಿಸಲಿದ್ದಾರೆ.
ಮುಖ್ಯ ಅಥಿತಿಗಳಾಗಿ ರಾಮಕೃಷ್ಣ ಗ್ರೂಪ್ ಆಫ್ ಹೋಟೆಲ್, ವಿಲೇಪಾರ್ಲೆ ಮುಂಬೈ ಸುಬ್ಬಯ್ಯ ಶೆಟ್ಟಿ, ಮಾಹೆ ಮಣಿಪಾಲದ ಸಹಕುಲಾಧಿಪತಿ ಡಾ. ಹೆಚ್.ಎಸ್ ಬಲ್ಲಾಳ್, ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಬೆಂಗಳೂರಿನ ಎಂ.ಆರ್.ಜಿ ಗ್ರೂಪ್ ನ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಬ್ರಹಾವರ ಬಂಟರ ಸಂಘದ ಮಾಜಿ ಅಧ್ಯಕ್ಷ ಶೇಡಿಕೂಡ್ಲು ವಿಠ್ಠಲ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಂಗಳೂರು ಸಿಟಿ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಕೈಲ್ಕೆರೆ ಭಾಸ್ಕರ ಶೆಟ್ಟಿ, ಪಳ್ಳಿ ಪೆಜಕೊಡಂಗೆ ಲೀಲಾವತಿ ಎಸ್.ಹೆಗ್ಡೆ, ಉಡುಪಿಯ ನಿವೃತ್ತ ವೈದ್ಯಾಧಿಕಾರಿ ಡಾ.ಎ ಮನೋರಂಜನ್ ದಾಸ್ ಹೆಗ್ಡೆ, ಮುಂಬೈನ ಚಾರ್ಟರ್ಡ್ ಅಕೌಂಟೆಂಟ್ ಎನ್.ಬಿ.ಶೆಟ್ಟಿ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ವಿಧಾನ್ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅದಾನಿ ಗೂಪ್ ನ ಅಧ್ಯಕ್ಷ ಕಿಶೋರ್ ಆಳ್ವ ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.
ಬೆಳಗ್ಗೆ 8.30 ರಿಂದ ತುಳುನಾಡ ಗಾನ ಗಂಧರ್ವ ಬಿರುದಾಂಕಿತ ಕಲರ್ಸ್ ಕನ್ನಡ ಖ್ಯಾತಿಯ ಪುತ್ತೂರು ಜಗದೀಶ ಆಚಾರ್ಯ ಹಾಗೂ ಬಳಗದವರಿಂದ ಭಕ್ತಿಸಂಗೀತ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2.30 ರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಹಾಗೂ ಸುರೇಶ್ ಶೆಟ್ಟಿ ಶಂಕರನಾರಾಯಣ ಸಾರಥ್ಯದಲ್ಲಿ ತೆಂಕು ಮತ್ತು ಬಡಗುತಿಟ್ಟಿನ ಕಲಾವಿದರ ಕೂಡುವುಕೆಯಿಂದ ಪಾಂಚಜನ್ಯ-ಅಸಿಕಾ ಪರಿಣಯ ಯಕ್ಷಗಾನ ಪ್ರದರ್ಶನ ಜರುಗಲಿದೆ.