ವಿಶ್ವ ಏಕತೆಯ ಪ್ರತೀಕ ಯುಎಇ ಯ ಪ್ರಥಮ ಹಿಂದೂ ಮಂದಿರ: ಪ್ರಧಾನಿ ಮೋದಿ

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನ ಮೊದಲ ಹಿಂದೂ ದೇವಾಲಯವಾದ ಅಬುಧಾಬಿಯಲ್ಲಿ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ್ ಸ್ವಾಮಿನಾರಾಯಣ ಸಂಸ್ಥಾ (BAPS) ಹಿಂದೂ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ದೇವಾಲಯದ ಆವರಣದಲ್ಲಿ ಗಂಗಾ ಮತ್ತು ಯಮುನಾ ನದಿಗಳಲ್ಲಿ ನೀರನ್ನು ಅರ್ಪಿಸಿದ ಪ್ರಧಾನಿ ಮೋದಿ ನಂತರ ದೇವಾಲಯದೊಳಗೆ ಪ್ರಾರ್ಥನೆ ಸಲ್ಲಿಸಿದರು.

ಅಬುಧಾಬಿಯಲ್ಲಿನ BAPS ಹಿಂದೂ ದೇವಾಲಯದ ಲೋಕಾರ್ಪಣೆ ಸಮಾರಂಭ ಗುರುವಾರ ನಡೆಯಿತು. ಉದ್ಘಾಟನೆಗೂ ಮುನ್ನ ಅರ್ಚಕರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಯುಎಇಯಲ್ಲಿ ಮೊದಲ ಹಿಂದೂ ದೇವಾಲಯದ ಕುರಿತು ಮಾತನಾಡಿದ ಪ್ರಧಾನಿ ಮೋದಿ, “ಯುಎಇ ದೇಶವು ಮಾನವ ಇತಿಹಾಸದಲ್ಲಿ ಸುವರ್ಣ ಅಧ್ಯಾಯವನ್ನು ಬರೆದಿದೆ” ಎಂದರು. “ಈ ದೇವಾಲಯವು ವಿಶ್ವ ಏಕತೆಯ ಸಂಕೇತವಾಗಲಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.