ಬೆಂಗಳೂರು: ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ವ್ಯವಸ್ಥೆಯನ್ನು ಸರಕಾರ ತಿಳಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಹಿಂದೆ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಈ ಬಗ್ಗೆ ಭರವಸೆ ನೀಡಿದ್ದರು. ಈಗ ಇದನ್ನು ಕಾರ್ಯ ರೂಪಕ್ಕೆ ತಂದಿದ್ದಾರೆ. ಹೀಗಾಗಿ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಿಎಂ ಬಜೆಟ್ ಗೆ ವಿಶೇಷ ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಈ ಮೂಲಕ ರಾಜ್ಯ ಪತ್ರಕರ್ತರ ಸಂಘದ ಮನವಿಗೆ ಸ್ಪಂದಿಸಿ , ನುಡಿದಂತೆ ನಡೆದಿದ್ದೀರಿ, ಹಾಗಾಗಿ ದಶಕಗಳ ಕನಸ್ಸು ಈಡೇರಿದಂತಾಗಿದೆ. ವಾರ್ತಾ ಇಲಾಖೆ ಮೂಲಕ ಈ ಕ್ರಮ ಶೀಘ್ರ ಜಾರಿಗೆ ಬರುವಂತಾಗಲಿ ಎಂದಿದ್ದಾರೆ. ಇದಕ್ಕೆ ಸಹಕಾರವಿತ್ತ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಮುಖ್ಯ ಮಂತ್ರಿ ಅವರ ಮಾಧ್ಯಮ ಸಲಹೆಗಾರರಾದ ಕೆ. ವಿ. ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಪರವಾಗಿ ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಕಳೆದ 10 ವರ್ಷದಿಂದ ಉಚಿತ ಬಸ್ ಪಾಸ್ ಗಾಗಿ ಬೇಡಿಕೆ ಮುಂದಿಟ್ಟಿದ್ದು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಈ ಯೋಜನೆಗೆ ಅನುಮೋದನೆ ದೊರೆತಿದೆ.