ಹೆಮ್ಮಾಡಿ: ಪ್ರಥಮ ಪಿ.ಯು.ಸಿ.ವ್ಯಾಸಾಂಗ ಮಾಡುತ್ತಿರುವ ಕುಂದಾಪುರ ತಾಲೂಕಿನ ಸಿದ್ಧಾಪುರ ಗ್ರಾಮದ ಜನ್ಸಾಲೆಯ ಶೋಭಿತ್ ತೀರ ಬಡತನ ಕುಟುಂಬದ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದು, ಹೆಮ್ಮಾಡಿಯ ಸಮರ್ಪಣಾ ಎಜುಕೇಶನಲ್ ಟ್ರಸ್ಟ್ ವತಿಯಿಂದ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ 25,000 ರೂಪಾಯಿಗಳ ಚೆಕ್ ಹಸ್ತಾಂತರಿಸಿದರು ಹಾಗೂ ವಿದ್ಯಾರ್ಥಿಯ ಪಿ.ಯು.ಸಿ ವ್ಯಾಸಂಗದ ಕುರಿತು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.