ಮಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮಾಚರಣೆ ನಡೆಸಲಾಯಿತು.
ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗದಲ್ಲಿ ನೂರಾರು ಮಂದಿ ಕಾರ್ಯಕರ್ತರು ಭಾಗಿಯಾಗಿ ಸಂಭ್ರಮಿಸಿದರು. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ತಕರ್ತರು ಬಿಜೆಪಿಯ ಧ್ವಜ ಹಿಡಿದುಕೊಂಡು ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಮೋನಪ್ಪ ಭಂಡಾರಿ, ರಾಜ್ಯದ ಅಪವಿತ್ರ, ಅನಿಷ್ಟ ಮೈತ್ರಿ ಕೊನೆಗೊಂಡಿದೆ. ಯಡಿಯೂರಪ್ಪ ಆಡಳಿತದಲ್ಲಿ ರಾಜ್ಯದಲ್ಲಿ ಮತ್ತೆ ಅಭಿವೃದ್ಧಿ ನಡೆಯಲಿದೆ ಎಂದು ಹೇಳಿದರು.
ಹಾಗೆಯೇ ಬೆಳ್ತಂಗಡಿ, ಬಂಟ್ವಾಳದಲ್ಲೂ ಕಾರ್ಯಕರ್ತರು ಸಂಭ್ರಮಿಸಿದರು.












