ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸಾರಿಗೆ ನೌಕರರಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು: ಇಲ್ಲಿನ ಫ್ರೀಡಂಪಾರ್ಕ್‌ನಲ್ಲಿ ಸಾರಿಗೆ ನೌಕರರು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

ಬೆಳಗ್ಗೆ 10:30 ರಿಂದ 5 ಗಂಟೆಯವರೆಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ಸಾರಿಗೆ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ.

ಹೊಸ ಒಪ್ಪಂದದ ಪ್ರಕಾರ ಜನವರಿ 1 ರಿಂದ ಸಾರಿಗೆ ನೌಕರರ ವೇತನ ಪರಿಷ್ಕರಣೆ ಆಗಬೇಕು. ಆದರೆ, ವೇತನ ಸುಧಾರಣೆಯ ಪ್ರಶ್ನೆಯನ್ನು ಸಾರಿಗೆ ಸಂಸ್ಥೆಗಳು ಇನ್ನೂ ಚರ್ಚಿಸಿಲ್ಲ. ಹೀಗಾಗಿ ವೇತನ ಪರಿಷ್ಕರಣೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾರ್ಮಿಕರು ಸಿದ್ಧರಾಗಿದ್ದಾರೆ.