ಉಡುಪಿ: ‘ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಓದಿಸಿ’ (ಬೇಟಿ ಬಚಾವೊ ಬೇಟಿ ಪಡಾವೊ) ಮತ್ತು ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಂತ್ರವಿಧಾನಗಳ (ಲಿಂಗ ಆಯ್ಕೆಯ ನಿಷೇಧ) ಕಾಯ್ದೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದ ರಾಯಭಾರಿಯಾಗಿ ಬ್ರಹ್ಮಾವರ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸವಿತಾ ಎರ್ಮಾಳ್ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಇವರು ಸವಿತಾ ಎರ್ಮಾಳ್ ಇವರನ್ನು ಆಯ್ಕೆ ಮಾಡಿದ್ದಾರೆ.
ಸವಿತಾ ಎರ್ಮಾಳ್ ಶ್ರೀ ಜ್ಞಾನಶಕ್ತಿ ಸ್ಥಾನಿಕ ಬ್ರಾಹ್ಮಣ ಸಭಾ (ರಿ.) ಬ್ರಹ್ಮಾವರ ಇದರ ಕಾರ್ಯದರ್ಶಿ, ಶ್ರೀ ಶಾಂಕರತತ್ವ ಪ್ರಸಾರ ಸಮಿತಿ ಉಡುಪಿ ಜಿಲ್ಲೆಯ ಸಹಸಂಚಾಲಕಿ, ಬ್ರಹ್ಮಾವರದ ಸಮಿತಿಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೆ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ವಿಭಾಗ) ಇದರ ರಾಷ್ಟ್ರೀಯ ಸೇವಾ ಯೋಜನಾ ಕೋಶ ಬೆಂಗಳೂರು ಇದರ ಮಂಗಳೂರು ವಿಭಾಗದ ವಿಭಾಗಾಧಿಕಾರಿಯಾಗಿ ನಿಯೋಜಿಸಲ್ಪಟ್ಟಿದ್ದಾರೆ.