ಪಡುಬಿದ್ರಿ: ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆ ಆಯೋಜಿಸುತ್ತಿರುವ ರಾಜ್ಯಮಟ್ಟದ ಕಡಲ ತೀರದ ಚಾರಣ ಹಾಗೂ ಪ್ರಕೃತಿ ಅಧ್ಯಯನ ಶಿಬಿರದ ಅಂಗವಾಗಿ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ನಿಂದ ಕಾಪು ಕಡಲ ತೀರದವರೆಗೆ ನಡೆದ ಕಡಲ ತೀರದ ಚಾರಣಕ್ಕೆ ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ಮತ್ತು ಉತ್ತಮ ನಾಗರಿಕರಾಗುವಲ್ಲಿ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಚಳುವಳಿಗಳು ಮಹತ್ತರ ಪಾತ್ರ ವಹಿಸುತ್ತವೆ. ಚಾರಣದ ಪೂರ್ಣ ಅನುಭವವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.
ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ, ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ್ ಭಟ್, ಶಿಬಿರದ ನಾಯಕ ರಾಮಚಂದ್ರ ಪಾಟ್ಕರ್, ಶಿಬಿರದ ಹೈಕಿಂಗ್ನ ಆಯೋಜಕ ವಿತೇಶ್ ಕಾಂಚನ್, ಗೀತಾ ನಟರಾಜ್, ರಾಜ್ಯ ಗೈಡ್ಸ್ ಆಯುಕ್ತ ರಾಧ ವೆಂಕಟೇಶ್ ಇದ್ದರು.
ಈ ಶಿಬಿರದಲ್ಲಿ ರಾಜ್ಯದ 16 ಜಿಲ್ಲೆಗಳಿಂದ 175ರೋವರ್ಗಳು ಭಾಗವಹಿಸುತ್ತಿದ್ದು, ಮೂರು ದಿನಗಳ ಕಾಲ ಶಿಬಿರ ನಡೆಯಲಿದೆ. ಫೆ. 23ರಂದು ಉಡುಪಿಯ ರಾಜಾಂಗಣದಲ್ಲಿ ಸಮಾಪನಗೊಳ್ಳಲಿದೆ.
ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಅಧ್ಯಯನ ಶಿಬಿರವನ್ನು ದಕ್ಷಿಣ ಕನ್ನಡ ಸ್ಕೌಟ್ಸ್ ಜಿಲ್ಲಾ ಮುಖ್ಯ ಆಯುಕ್ತ ಎಂ. ಮೋಹನ್ ಆಳ್ವ ಉದ್ಘಾಟಿಸಿ ಬಳಿಕ ಮಾತನಾಡಿ, ರೋವರ್–ರೇಂಜರ್ ಘಟಕಗಳು ಪ್ರಕೃತಿ ಸಂರಕ್ಷಣೆ ಮತ್ತು ಸಮುದ್ರ ತೀರದ ಸ್ವಚ್ಛತೆಯ ಕುರಿತು ಹಮ್ಮಿಕೊಂಡು ಬರುತ್ತಿರುವ ಕಾರ್ಯಕ್ರಮಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಪ್ರಯತ್ನ ಶಿಕ್ಷಕರಿಂದ ನಡೆಯಬೇಕಿದೆ ಎಂದರು.
ಅಪರ ಜಿಲ್ಲಾಧಿಕಾರಿ ಉಡುಪಿ ಮಮತಾ ದೇವಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ್ ಭಟ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಸುಧಾಕರ್ ಶುಭಾ ಶಂಸನೆಗೈದರು.
ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್, ಕಾಪು ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಆಲ್ಬನ್ ರೋಡ್ರಿಗಸ್, ಬೈಂದೂರು ಸ್ಥಳೀಯ ಸಂಸ್ಥೆ ಅಧ್ಯಕ್ಷ ನರಸಿಂಹ ದೇವಾಡಿಗ, ಕುಂದಾಪುರ ಸ್ಥಳೀಯ ಸಂಸ್ಥೆ ಅಧ್ಯಕ್ಷೆ ಗುಣರತ್ನ, ಬ್ರಹ್ಮಾವರ ಸ್ಥಳೀಯ ಸಂಸ್ಥೆ ಅಧ್ಯಕ್ಷ ಅಶೋಕ್ ಭಟ್, ಉಡುಪಿ ಸ್ಥಳೀಯ ಸಂಸ್ಥೆ ಅಧ್ಯಕ್ಷ ವಿನ್ಸೆಂಟ್ ಡಿಸೋಜ, ಶಿಬಿರ ನಾಯಕ ರಾಮಚಂದ್ರ ಪಾಟ್ಕರ್, ಶಿಬಿರ ನಾಯಕಿ ಸವಿತಾ ನಾಯಕ್, ಜಿಲ್ಲಾ ಗೈಡ್ಸ್ ಆಯುಕ್ತೆ ಜ್ಯೋತಿ ಜೆ ಪೈ, ರಾಜ್ಯ ಪ್ರತಿನಿಧಿ ಪ್ರತೀನ್ ಕುಮಾರ್, ರೋವರ್ ಲೀಡರ್ಗಳಾದ ಹರೀಶ್ ಕೋಟ್ಯಾನ್, ಶರತ್ರಾಜ್, ವಂದನ ಉಪಸ್ಥಿತರಿದ್ದರು.