ಸ್ಟೀಲ್ ಬ್ರಿಡ್ಜ್ ಗರ್ಡರ್ ಗೆ ಡಿ.ಆರ್.ಡಿ.ಓ ಅಂಗೀಕಾರ: ಇಂದ್ರಾಳಿ ರೈಲ್ವೆ ಮೇಲ್ಸೆತುವ ಕಾಮಗಾರಿಗೆ ವೇಗ

ಉಡುಪಿ: ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಗಾಗಿ ಹುಬ್ಬಳ್ಳಿಯಲ್ಲಿ ನಿರ್ಮಾಣಗೊಂಡಿರುವ ಸ್ಟೀಲ್ ಬ್ರಿಡ್ಜ್ ಗರ್ಡರ್ ರೈಲ್ವೇ ಇಲಾಖೆಯ ಡಿಆರ್ ಡಿಒ ಪರಿಶೀಲನೆಯಿಂದ ಅಂಗೀಕೃತವಾಗಿ ಉಡುಪಿಗೆ ಆಗಮಿಸಲಿದೆ. ಉಡುಪಿ ಜನತೆಯ ಬಹು ದಿನದ ಬೇಡಿಕೆಯಾಗಿರುವ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣ ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ಸಹಕರಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸ್ಥಳೀಯ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಉಡುಪಿ ಜನತೆಯ ಪರವಾಗಿ ಶಾಸಕ ಯಶ್ ಪಾಲ್ ಸುವರ್ಣ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.