ಮೂಡುಬಿದಿರೆ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕೇರಳದಲ್ಲಿ ಪ್ರಿಯಕರನೊಂದಿಗೆ ಪತ್ತೆ.

ಮೂಡುಬಿದಿರೆ: ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿಪಿಟಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶುಕ್ರವಾರ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ತನ್ನ ಪ್ರಿಯಕರನನ್ನು ಕೇರಳದಲ್ಲಿ ವಿವಾಹವಾಗಿ ಪತ್ತೆಯಾಗಿದ್ದಾಳೆ.

ಬೈಂದೂರು ತಾಲೂಕಿನ ಕೊಲ್ಲೂರು ನಿವಾಸಿ 19ವರ್ಷದ ಆದಿರಾ ಎಂಬಾಕೆ ಶುಕ್ರವಾರ ಬೆಳಿಗ್ಗೆ ಕಾಣೆಯಾಗಿದ್ದಳು. ಅಂದು ತನ್ನ ಸಹಪಾಠಿಗಳೊಂದಿಗೆ ಕಾಲೇಜ್ ಬಸ್ ನಲ್ಲಿ ಬಂದು ಮೂಡುಬಿದಿರೆಯ ಕನ್ನಡ ಭವನದಲ್ಲಿ ಇಳಿದಿದ್ದಳು. ಆ ಬಳಿಕ ಅಲ್ಲಿಂದ ಕಾಲೇಜಿಗೆ ಹೋಗದೆ ನಾಪತ್ತೆಯಾಗಿದ್ದಳು.

ಈ ಬಗ್ಗೆ ಆಕೆಯ ಪೋಷಕರು ಮೂಡುಬಿದಿರೆ ಠಾಣೆಯಲ್ಲಿ ದೂರು ನೀಡಿದ್ದರು. ಇದೀಗ ಯುವತಿ ಕೇರಳದಲ್ಲಿ ತನ್ನ ಪ್ರಿಯಕರನನ್ನು ಮದುವೆಯಾಗಿದ್ದಾಳೆ ಎಂದು ತಿಳಿದುಬಂದಿದೆ.